ಶ್ರೀನಗರ : ಜಮ್ಮು ಕಾಶ್ಮೀರಾದಲ್ಲಿ ಉಗ್ರರು ಹಾಗೂ ಯೋಧರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಕೋಲಾರ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಣಿಂಬೆಲೆ ಗ್ರಾಮದ ಪ್ರಶಾಂತ್(25) ಹುತಾತ್ಮ ಯೋಧ ಎಂದು ಗುರುತಿಸಲಾಗಿದ್ದು, 17ನೇ ಮದ್ರಾಸ್ ರೆಜಿಮೆಂಟ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ಪ್ರಶಾಂತ್ ಅವರು ನಿನ್ನೆ ಸಂಜೆ ಜಮ್ಮು ಕಾಶ್ಮೀರಾದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಹುತಾತ್ಮರಾಗಿದ್ದು, ಹುತಾತ್ಮ ಯೋಧರ ಪಾರ್ಥೀವ ಶರೀರ ನಾಳೆ ತಮ್ಮ ಸ್ವಗ್ರಾಮವಾದ ಬಂಗಾರಪೇಟೆಯ ಕಣಿಂಬೆಲೆ ಗ್ರಾಮವನ್ನು ತಲುಪಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.










