ಸಿದ್ದರಾಮಯ್ಯ ಮತಾಂಧ ಎನ್ನುವುದರಲ್ಲಿ ಅನುಮಾನವಿಲ್ಲ: ಕೆ.ಎಸ್‌. ಈಶ್ವರಪ್ಪ…

243

ಬಾಗಲಕೋಟೆ:ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್​.ಈಶ್ವರಪ್ಪ ಅವರು  ಸಿದ್ದರಾಮಯ್ಯ ಮತಾಂಧ ಎನ್ನುವುದರಲ್ಲಿ ಅನುಮಾನವಿಲ್ಲ. ಟಿಪ್ಪುಗಿಂತಲೂ ಸಿದ್ದರಾಮಯ್ಯ ಮತಾಂಧ ಎಂದು ಬಿಜೆಪಿ ಸಂಸದ ನಳಿನ್ ಕುಮಾರ್ ಹೇಳಿಕೆಯನ್ನು ನಾನು ಒಪ್ಪುತ್ತೇನೆ. ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾದರೂ ಸಿದ್ದರಾಮಯ್ಯ ಅವರು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ.  ಕೊಲೆಗಡುಕರ ವಿರುದ್ಧ ಕ್ರಮ ತೆಗೆದುಕೊಂಡಿದ್ದರೆ ಸಿದ್ದರಾಮಯ್ಯ ಅವರನ್ನು ಒಳ್ಳೆಯ ಮುಖ್ಯಮಂತ್ರಿ ಎಂದು ಒಪ್ಪಿಕೊಳ್ಳುತ್ತಿದ್ದೆ. ಆದರೆ ಕೊಲೆಗಡುಕರನ್ನು ಬಿಟ್ಟು ಕೋಮುವಾದಿಗಳನ್ನು ಹತ್ತಿಕ್ಕುತ್ತೇವೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಮತಾಂಧ ಎಂದಿರುವುದು ಸರಿಯಾಗಿದೆ. ಆದರೆ ಅವರನ್ನು ಟಿಪ್ಪುವಿಗೆ ಹೋಲಿಸಿದ್ದು ಎಷ್ಟು ಸರಿ ಎನ್ನುವುದು ಗೊತ್ತಿಲ್ಲ ಎಂದಿದ್ದಾರೆ.