ಬಳ್ಳಾರಿ: ಚಿರತೆ ದಾಳಿಗೆ ಓರ್ವ ಬಾಲಕಿ ಬಲಿಯಾಗಿರುವ ಘಟನೆ ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ನಡೆದಿದೆ. ಜಯಸುಧಾ(13) ಚಿರತೆ ದಾಳಿಗೆ ಬಲಿಯಾದ ಬಾಲಕಿ. ಜಯಸುಧಾ ಜಮೀನಿಗೆ ತೆರಳಿದ್ದ ಸಂದರ್ಭದಲ್ಲಿ ಚಿರತೆ ಬಾಲಕಿಯನ್ನು ಎಳೆದೊಯ್ಯುತ್ತಿದ್ದಾಗ ಪೋಷಕರ ಕಿರುಚಾಡಿದ್ದಾರೆ. ಆಗ ಚಿರತೆ ಬಾಲಕಿಯನ್ನು ಬಿಟ್ಟು ಹೋಗಿದೆ. ತಕ್ಷಣ ಬಾಲಕಿಯನ್ನು ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ.










