ಬೆಂಗಳೂರು: ದೇಶ ಮತ್ತೊಂದು ಚುನಾವಣೆಗೆ ಸಜ್ಜಾಗಿದೆ. ಪ್ರಜಾತಂತ್ರದ ಈ ಸಮರದಲ್ಲಿ ಚುನಾವಣೆ ಪ್ರಕ್ರಿಯೆಯನ್ನು ಸ್ವತಂತ್ರ,ನಿಷ್ಪಕ್ಷಪಾತವಾಗಿ ನಡೆಯುವುದು ಎಂದು ಆಶಿಸುತ್ತೇನೆ.ಎಲ್ಲ ಪಕ್ಷಗಳು,ಅಭ್ಯರ್ಥಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವುದರೊಂದಿಗೆ ಮತದಾರರ ತೀರ್ಪನ್ನು ಗೌರವಿಸೋಣ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿದ್ದಾರೆ.










