ಬೆಂಗಳೂರು -ರೈತರು ಸಹಕಾರಿ ಬ್ಯಾಂಕುಗಳಲ್ಲಿ ಪಡೆದಿರುವ ಒಂದು ಲಕ್ಷ ರೂ.ವರೆಗಿನ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಎರಡು ಲಕ್ಷ ರೂ.ವರೆಗಿನ ಸಾಲವನ್ನು ಮನ್ನಾ ಮಾಡಲು ಸಮ್ಮಿಶ್ರ ಸರಕಾರ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದು ಹಾಗೂ ಸಾಲ ಮನ್ನಾ ಮಾಡುವುದರ ಜೊತೆಗೆ ಒಂದು ತಿಂಗಳಲ್ಲಿ ರೈತರಿಗೆ ಋಣಮುಕ್ತ ಪತ್ರ ಹಾಗೂ ಹೊಸ ಸಾಲ ಪಡೆಯಲು ಅವಕಾಶ ಕಲ್ಪಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗಿದೆ. ಸಹಕಾರಿ ಸಂಘಗಳಲ್ಲಿನ ಚಾಲ್ತಿ ಸಾಲ ಒಂದು ಲಕ್ಷ ರೂ.ವರೆಗೂ ಮನ್ನಾ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಇದಕ್ಕಾಗಿ 10,700 ಕೋಟಿ ರೂ.ಹೊರೆಯಲಾಗಲಿದೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ ನೀಡುವ 5 ಕೆ.ಜಿ.ಅಕ್ಕಿಯನ್ನು 7 ಕೆ.ಜಿ.ಗೆ ಹೆಚ್ಚಿಸಲು ಎರಡೂವರೆ ಸಾವಿರ ಕೋಟಿ ರೂ ಹೊರೆಯಾಗಲಿದೆ. ಈ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದು ಹಿಂದಿನ ಸರಕಾರದ ಎಲ್ಲ ಕಾರ್ಯಕ್ರಮಗಳನ್ನು ಮುಂದುವರೆಸಲಾಗುವುದು ಎಂದು ಅವರು ತಿಳಿಸಿದರುಸಾಲ ಮನ್ನಾ ಯೋಜನೆಯಿಂದಾಗಿ, ಬಾಗಲಕೋಟೆಗೆ 1,820 ಕೋಟಿ ರೂ, ವಿಜಯಪುರ 1,510 ಕೋಟಿ ರೂ, ಧಾರವಾಡಕ್ಕೆ 1,026 ಕೋಟಿ ರೂ, ಹಾವೇರಿಗೆ 1,036 ಕೋಟಿ ರೂ., ಗದಗ 722 ಕೋಟಿ ರೂ, ಉತ್ತರ ಕನ್ನಡ 407 ಕೋಟಿ ರೂ, ಬೆಳಗಾವಿ ಜಿಲ್ಲೆಗೆ 2,670 ಕೋಟಿ ರೂ ದಾವಣಗೆರೆ 1,212 ಕೋಟಿ ರೂ, ತುಮಕೂರು 1,185 ಕೋಟಿ ರೂ.ಗಳ ಪ್ರಯೋಜನವಾಗಲಿದೆ ಎಂದು ಅವರು ಹೇಳಿದರು.ಶಿವಮೊಗ್ಗ 988 ಕೋಟಿ ರೂ, ಚಿತ್ರದುರ್ಗ 918 ಕೋಟಿ ರೂ, ಬೆಂಗಳೂರು ಗ್ರಾಮಾಂತರ 731 ಕೋಟಿ ರೂ, ರಾಮನಗರ 630 ಕೋಟಿ ರೂ.ಗಳ ಪ್ರಯೋಜನವಾಗಲಿದೆ