ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಗೌಡ ಅವರ ಕುಟುಂಬದಲ್ಲಿ ಅದ್ದೂರಿಯಾಗಿ ನಡೆಯಬೇಕಿದ್ದ ಮದುವೆಗೆ ಲಾಕ್ಡೌನ್ ಎಫೆಕ್ಟ್ ತಟ್ಟಿದ್ದು, ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಮಹೋತ್ಸವ ರಾಮನಗರದ ತಮ್ಮ ಫಾರ್ಮ್ಹೌಸ್ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ. ಈ ಹಿಂದೆ ನಿಖಿಲ್ ಹಾಗೂ ರೇವತಿ ಅವರ ಮದುವೆಯನ್ನು ಅದ್ದೂರಿಯಾಗಿ ನಡೆಸಲು ಭಾರಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್ಡೌನ್ ಆಗಿದ್ದು, ಹೀಗಾಗಿ ಈ ಹಿಂದೆ ನಿಗದಿಯಾದಂತೆ ಇಂದು ನಿಖಿಲ್ ಹಾಗೂ ರೇವತಿ ವಿವಾಹ ಸರಳವಾಗಿ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿದೆ.









