ಲಾಕ್‍ಡೌನ್ ಉಲ್ಲಂಘನೆ : ನಾಳೆಯಿಂದ ರಾಜ್ಯಗಳಲ್ಲಿ ಪ್ಯಾರಾ ಮಿಲಿಟರಿ ಪಡೆಗಳ ನಿಯೋಜನೆ ಸಾಧ್ಯತೆ…?

887
firstsuddi

ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶಾದ್ಯಂತ ಲಾಕ್‍ಡೌನ್ ಮಾಡಿ ಆದೇಶ ಹೊರಡಿಸಿದ್ದು, ಆದರೆ ಸಾರ್ವಜನಿಕರು ಲಾಕ್‍ಡೌನ್ ಆದೇಶವನ್ನು ಉಲ್ಲಂಘಿಸಿ ರಸ್ತೆಯಲ್ಲಿ ಅನಗತ್ಯವಾಗಿ ತಿರುಗಾಡುತ್ತಿದ್ದು, ಸಾರ್ವಜನಿಕರು ರಸ್ತೆಗೆ ಇಳಿಯದಂತೆ ಪೊಲೀಸರು ಲಾಠಿ ಚಾರ್ಜ್, ಕೈ ಮುಗಿದು ಕೇಳಿಕೊಂಡರೂ ಇದ್ಯಾವುದಕ್ಕೂ ಸಾರ್ವಜನಿಕರು ಬಗ್ಗದೆ ಇರುವುದರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಗಳಿಗೆ ಪ್ಯಾರಾ ಮಿಲಿಟರಿ ಪಡೆಗಳನ್ನು ನಿಯೋಜಿಸಲು ಚಿಂತನೆ ನಡೆಸಿದ್ದಾರೆ. ಲಾಕ್‍ಡೌನ್ ಉಲ್ಲಂಘನೆ ಮಾಡುತ್ತಿರುವ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಪ್ಯಾರಾ ಮಿಲಿಟರಿ ಪಡೆಗಳನ್ನು ನಿಯೋಜನೆ ಮಾಡಲು ಅಮಿತ್ ಶಾ ಅವರು ಎಲ್ಲಾ ರಾಜ್ಯದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ನಾಳೆಯಿಂದಲೇ ರಾಜ್ಯಗಳಲ್ಲಿ ಪ್ಯಾರಾ ಮಿಲಿಟರಿ ಪಡೆಗಳನ್ನು ನಿಯೋಜಿಸುವ ಸಾಧ್ಯತೆ ಇದೆ.