ನವದೆಹಲಿ: ಲೋಕಸಭೆ ಚುನಾವಣೆ ದಿನಾಂಕ ಪ್ರಕಟಕೊಂಡಿದ್ದು, ಕರ್ನಾಟಕದಲ್ಲಿ ಏಪ್ರಿಲ್ 18 ಹಾಗೂ 23ರಂದು ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಮತದಾನ ಏಪ್ರಿಲ್ 18 ಹಾಗೂ ಎರಡನೇ ಹಂತದ ಮತದಾನ ಏಪ್ರಿಲ್ 23 ರಂದು ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರ ಅವರು ತಿಳಿಸಿದ್ದಾರೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.










