LPG ದರದಲ್ಲಿ ಇಂದು ಮತ್ತೆ 25 ರೂ. ಏರಿಕೆ!

153
Firstsuddi

ನವದೆಹಲಿ : ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನತೆಗೆ ತೈಲ ಕಂಪನಿಗಳು ಅಡುಗೆ ಅನಿಲ ಮತ್ತು ವಾಣಿಜ್ಯ ಸಿಲಿಂಡರ್ ಗಳ ಬೆಲೆ ಹೆಚ್ಚಿಸುವ ಮೂಲಕ ಮತ್ತೊಮ್ಮೆ ಶಾಕ್ ನೀಡಿದೆ.

ಅಡುಗೆ ಅನಿಲದ ಸಿಲಿಂಡರ್ ಮೇಲೆ 25 ರೂ. ಹಾಗೂ ವಾಣಿಜ್ಯ ಸಿಲಿಂಡರ್ ಮೇಲೆ 95 ರೂ.ಗಳಷ್ಟು ಹೆಚ್ಚಿಸಿದ್ದು, ಪರಿಷ್ಕೃತ ಬೆಲೆ ಇಂದಿನಿಂದ ಜಾರಿಗೆ ಬರಲಿವೆ ಎಂದು ತೈಲ ಕಂಪನಿಗಳು ತಿಳಿಸಿವೆ.

ಫೆಬ್ರವರಿ ತಿಂಗಳಲ್ಲಿ ಎಲ್ ಪಿಜಿ ಸಿಲಿಂಡರ್ ದರವನ್ನು ಮೂರು ಬಾರಿ ಏರಿಕೆ ಮಾಡಲಾಗಿತ್ತು, ಏರಿಕೆಯ ನಂತರ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 14.2 ಕೆ.ಜಿ ದೇಶೀಯ ಎಲ್ಪಿಜಿ ಸಿಲಿಂಡರ್ 794 ರೂ. ಇದ್ದದ್ದು 819 ರೂ.ಗೆ ರೂಪಾಯಿಯಾಗಿದೆ. ಹಾಗೂ ವಾಣಿಜ್ಯ ಸಿಲಿಂಡರ್ಗೆ 95 ರೂ.ಗಳ ಹೆಚ್ಚಳದೊಂದಿಗೆ ಪ್ರತಿ ಸಿಲಿಂಡರ್ ದರ 1,614 ರೂ.ಗೆ ಏರಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಜೊತಗೆ ಗ್ಯಾಸ್ ಸಿಲಿಂಡರ್ ಬೆಲೆಯೂ ಸಹ ಹೆಚ್ಚಾಗುತ್ತಿರುವುದು ಜನಸಾಮಾನ್ಯರಿಗೆ ವಿಪರೀತ ಹೊರೆಯಾಗಿದೆ .