ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬುಧವಾರ ಜೆಕ್ ರಿಪಬ್ಲಿಕ್ ದೇಶದ ರಕ್ಷಣಾ ಸಚಿವರಾದ ಲುಬೊಮಿರ್ ಮೇತ್ನಾರ್ ನೇತೃತ್ವದ ತಂಡವು ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತ ಉಪಸ್ಥಿತರಿದ್ದರು.










