ಮಹದಾಯಿ ವಿವಾದ – ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ…

191
firstsuddi

ನವದೆಹಲಿ : ಮಹದಾಯಿ ನದಿ ನೀರನ್ನು ಹಂಚಿಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ ತೀರ್ಪನ್ನು ಜಾರಿಗೊಳಿಸಬೇಕೆಂದು ಮನವಿ ಮಾಡಿದ್ದ ಕರ್ನಾಟಕದ ಮನವಿಗೆ ಕೇಂದ್ರ ಸರ್ಕಾರ ಮನ್ನಣೆ ನೀಡಿದ್ದು, ನ್ಯಾಯಾಧಿಕರಣ ನೀಡಿದ್ದ ಈ ತೀರ್ಪಿಗೆ ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ. ಮಹದಾಯಿ ನೀರು ಹಂಚಿಕೆ ಕುರಿತು ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಸುಪ್ರೀಂ ಕೋರ್ಟ್‍ಗೆ ಅರ್ಜಿಯನ್ನು ಸಲ್ಲಿಸಿತ್ತು. ಈ ಕುರಿತು ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಧಿಕರಣ ಮಹದಾಯಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವಂತೆ ಫೆ. 22ರಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಅದರಂತೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಅಂತಿಮ ಅಧಿಸೂಚನೆಯನ್ನು ಹೊರಡಿಸಿ ಆದೇಶವನ್ನು ಹೊರಹಾಕಿದ್ದು, ಇದೀಗ ಕರ್ನಾಟಕ ಮಹದಾಯಿ ನದಿಯಿಂದ 13.5 ನೀರನ್ನು ಬಳಸಿಕೊಳ್ಳಬಹುದಾಗಿದೆ.