ನವದೆಹಲಿ:ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಪ್ಯಾಂಕ್ರಿಯಾಟಿಕ್ ಕಾಯಿಲೆ ಯಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಸಲಹೆಯಂತೆ ಪರಿಕ್ಕರ್ ಅವರನ್ನು ಹೆಚ್ಚಿನ ತಪಾಸಣೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು , ಅನಾರೋಗ್ಯಕ್ಕೆ ಒಳಗಾಗಿರುವ ಮನೋಹರ್ ಪರಿಕ್ಕರ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಜೊತೆ ಮಾತನಾಡಿ, ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಸಿಎಂ ಆಗಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.










