ಚಿಕ್ಕಮಗಳೂರು:ನಿತ್ಯ ದೇವತಾರ್ಚನೆ ಮತ್ತು ಧರ್ಮಾಚರಣೆಯಿಂದ ಮನುಷ್ಯನ ಬದುಕು ಸಾರ್ಥಕವಾಗುತ್ತದೆ ಎಂದು ಪುಷ್ಪಗಿರಿ ಮಹಾಸಂಸ್ಥಾನದ ಶ್ರೀ ಸೋಮಶೇಖರ ಶಿವಾಚಾರ್ಯ ಭಗವತ್ಪಾದ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ರಾಮೇದೇವರಹಳ್ಳಿಯಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಾಲಯದ ಗೋಪುರ ಕಳಶ ಪ್ರತಿಷ್ಠಾಪನೆ ಅಂಗವಾಗಿ ಇತ್ತೀಚೆಗೆ ನಡೆದ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಧರ್ಮಾಚರಣೆಯಿಂದ ಮತ್ತು ಭಗವಂತನಿಗೆ ಶರಣಾಗುವುದರಿಂದ ಸುಖ, ಶಾಂತಿ, ನೆಮ್ಮದಿ ದೊರೆಯುತ್ತದೆ ಎಂದ ಅವರು ಎಲ್ಲರೂ ಇದನ್ನು ಅರ್ಥಮಾಡಿಕೊಳ್ಳಬೇಕು ಧರ್ಮಾಚರಣೆಗೆ ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.
ಮಾಡಾಳು ನಿರಂಜನ ಪೀಠದ ಶ್ರೀ ರುದ್ರಮುನಿ ಸ್ವಾಮೀಜಿ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಧರ್ಮಾಚರಣೆಗೆ ಆದ್ಯತೆ ನೀಡಬೇಕು ಎಂದರು.
ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಸಮಾರಂಭದಕ್ಕೆ ಮುನ್ನ ಪುಪ್ಷಗಿರಿ ಶ್ರೀಗಳು ಗೋಪುರ ಕಳಶದ ಪ್ರತಿಷ್ಠಾಪನೆ ನೆರವೇರಿಸಿದರು.
ಪ್ರತಿಷ್ಠಾಪನೆ ಪ್ರಯುಕ್ತ ದೇವಾಲಯದಲ್ಲಿ ವಿವಿಧ ಹೋಮ ಹವನ, ಗಂಗಾ ಪೂಜೆ, ಕುಂಭಾಬಿಷೇಕ ಜರುಗಿತು.
ಮನಗುಂಡಿ ಶ್ರೀ ಗುರುಬಸವ ಮಹಾಮನೆಯ ಶ್ರೀ ಬಸವಾನಂದ ಸ್ವಾಮೀಜಿ, ಶಾಸಕ ಸಿ.ಟಿ.ರವಿ, ವಿಧಾನಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಗ್ರಾ.ಪಂ.ಸದಸ್ಯ ಕೆ.ವಿ.ವಿರೂಪಾಕ್ಷ, ಬಿ.ಹೆಚ್.ಬಸವರಾಜ್, ಮೀನುಗಾರಿಕೆ ಸಚಿವರ ಆಪ್ತಕಾರ್ಯದರ್ಶಿ ಕೆ.ಸಿ.ವಿರೂಪಾಕ್ಷ, ಬಿ.ಎಲ್.ಜಯಕುಮಾರ್, ವಿಜಯಕುಮಾರ್, ಆರ್.ಸಿ.ರಘು, ಜಗದೀಶ್ ಉಪಸ್ಥಿತರಿದ್ದರು.
Home ಸ್ಥಳಿಯ ಸುದ್ದಿ ನಿತ್ಯ ದೇವತಾರ್ಚನೆ ಮತ್ತು ಧರ್ಮಾಚರಣೆಯಿಂದ ಮನುಷ್ಯನ ಬದುಕು ಸಾರ್ಥಕವಾಗುತ್ತದೆ: ಶ್ರೀ ಸೋಮಶೇಖರ ಶಿವಾಚಾರ್ಯ ಭಗವತ್ಪಾದ ಸ್ವಾಮೀಜಿ…










