ಮುಂಬೈ: ಮರಾಠರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ. 16ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ಮಹಾರಾಷ್ಟ್ರಾದಲ್ಲಿ ಇಂದು ಬಂದ್ ಗೆ ಕರೆ ನೀಡಿದ್ದು, ಬೆಳಗ್ಗೆ 8ರಿಂದ ಆರಂಭವಾಗಿರುವ ಬಂದ್ ಸಂಜೆ 6ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತಮ್ಮ ಸಮುದಾಯದ ಮೀಸಲಾತಿ ಬೇಡಿಕೆಯನ್ನು ಪರಿಗಣಿಸುವುದಾಗಿ ಹಲವು ಬಾರಿ ಭರವಸೆ ನೀಡಿದ್ದರು ಆದರೆ ಅವರು ಈವರೆಗೆ ಏನನ್ನೂ ಮಾಡಿಲ್ಲ ಎಂದು ಮರಾಠಾ ಸಂಘಟನೆಗಳು ಆಕ್ಷೇಪಿಸಿದ್ದು, ವಿವಿಧ ಮರಾಠ ಸಂಘಟನೆಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನೀಡಿದೆ.