ಹಿರಿಯ ನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ವಿಧಿವಶ…

298
firstsuddi

ಬೆಂಗಳೂರು : ಹಿರಿಯ ನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ(85) ಅವರು ಇಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಣ್ಣಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಹಿರಣ್ಣಯ್ಯ ಅವರು ತಮ್ಮ ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದು, ಅವರು “ಕೇರ್ ಆಫ್ ಫುಟ್‍ಬಾತ್” “ನಂ73,ಶಾಂತಿ ನಿವಾಸ” ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಗುಬ್ಬಿ ವೀರಣ್ಣ ಪ್ರಶಸ್ತಿ ದೊರಕಿದೆ.