ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಲಿಂಗೈಕ್ಯ…

205
firstsuddi

ಬೆಂಗಳೂರು: ಕೂಡಲಸಂಗಮದ ಬಸವ ಧರ್ಮ ಪೀಠದ ಅಧ್ಯಕ್ಷೆ, ಮಾತೆ ಮಹಾದೇವಿ(74) ಇಂದು ಲಿಂಗೈಕ್ಯರಾಗಿದ್ದಾರೆ. ಹಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ  ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು  ಕೊನೆಯುಸಿರೆಳೆದಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವೇಳೆ ಮಾತೆ ಮಹಾದೇವಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು.