ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ರೋಹಿತ್ ಬದಲು ಕನ್ನಡಿಗ ಮಯಾಂಕ್ ಅಗರ್ವಾಲ್…

193
firstsuddi

ಮುಂಬೈ : ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ಗಾಯದ ಸಮಸ್ಯೆಯಿಂದ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದು, ನಾಳೆಯಿಂದ ನಡೆಯುವ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಅವರ ಬದಲಾಗಿ ಕನ್ನಡಿಗ ಮಯಾಂಕ್ ಅಗರ್ವಾಲ್ ಆಡಲಿದ್ದಾರೆ. ಭಾನುವಾರ ನಡೆದ ಟಿ20 ಅಂತಿಮ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರು 60 ರನ್ ಗಳಿಸಿ ಬಳಿಕ ಗಾಯದ ಸಮಸ್ಯೆಗೆ ತುತ್ತಾದರು. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ.
ಅಲ್ಲದೇ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಹೊಸದಾಗಿ ನವದೀಪ್ ಸೈನಿ, ಶುಭಮನ್ ಗಿಲ್ ತಂಡವನ್ನು ಸೇರಿಕೊಂಡಿದ್ದಾರೆ. ನವದೀಪ್ ಸೈನಿ ಅವರು ಟಿ20 ಸರಣಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು.

ಟೆಸ್ಟ್ ಟೀಂ: ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ(ಉಪ ನಾಯಕ), ಹನುಮ ವಿಹಾರಿ, ವೃದ್ಧಿಮಾನ್ ಶಾ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಜಸ್ಪ್ರಿತ್ ಬುಮ್ರಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ಇಶಾಂತ್ ಶರ್ಮಾ