ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಇಂದು ಹುಬ್ಬಳ್ಳಿಯಲ್ಲಿ ಸಭೆ ಕರೆಯಲಾಗಿತ್ತು. ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಮಾರ್ಚ್ 9 ರಂದು ಹಾವೇರಿ ಸಮಾವೇಶದಲ್ಲಿ ಭಾಗಿಯಾಗುವ ಹಿನ್ನೆಲೆಯಲ್ಲಿ ಸಿದ್ದತಾ ಪೂರ್ವ ಸಭೆಯನ್ನು ಕರೆಯಲಾಗಿದ್ದು, ಈ ಸಭೆಯಲ್ಲಿ ಹುಬ್ಬಳ್ಳಿ ಧಾರವಾಡ, ಗದಗ, ಹಾವೇರಿ ಜಿಲ್ಲೆಯ ಪ್ರಮುಖ ನಾಯಕರು ಭಾಗವಹಿಸಿದ್ದರು.