ಕುಂದಾಪುರ: ಕುಂದಾಪುರ ತಾಲೂಕು ಪಂಚಾಯತ್ ಮುಂಭಾಗದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದಾತ ಮಾನಸಿಕ ಅಸ್ವಸ್ಥನಾಗಿದ್ದು, ಕುಂದಾಪುರ ಕೋಡಿ ನಿವಾಸಿ ರಾಘವೇಂದ್ರ ಗಾಣಿಗ(43) ಎಂದು ಗುರುತಿಸಲಾಗಿದೆ. ರಾಘವೇಂದ್ರ ಗಾಣಿಗ ಹಲವಾರು ವರ್ಷಗಳಿಂದ ಮಾನಸಿಕ ಅಸ್ವಸ್ಥನಾಗಿದ್ದು ವೈದ್ಯರಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಇಂದು ಬೆಳಿಗ್ಗೆ ಕೂಡ ಕುಂದಾಪುರ ಮಾತಾ ಹಾಸ್ಪಿಟಲ್ ಗೆ ಮಾನಸಿಕ ಚಿಕಿತ್ಸೆ ಕರೆತಂದಾಗ ತಪ್ಪಿಸಿಕೊಂಡಿದ್ದು, ಅಲ್ಲಿಂದ ತಾಲೂಕು ಪಂಚಾಯತ್ ಕಛೇರಿ ಎದುರು ಬಂದು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕುಂದಾಪುರ ಠಾಣಧಿಕಾರಿ ಹರೀಶ್ ನಾಯ್ಕ್ ಅವರು ರಾಘವೇಂದ್ರ ಗಾಣಿಗನನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ರಾಘವೇಂದ್ರ ಗಾಣಿಗ ಈ ಹಿಂದೆ ಕುಂದಾಪುರದ ಕಾಲೇಜೊಂದರಲ್ಲಿ ಹಿಂದಿ ಶಿಕ್ಷಕನಾಗಿದ್ದು, ಇವರು ದಿನ ಟಿವಿ ನೋಡುವ ಗೀಳು ಬೆಳೆಸಿಕೊಂಡಿದ್ದ ಎನ್ನಲಾಗಿದೆ










