ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿಯ ಅವಘಡ ಸಂಭವಿಸಿದ್ದು, ಬಿಜ್ನೋರ್- ಮೊಹಿತ್ ಪೆಟ್ರೊ ಕೆಮಿಕಲ್ ಫ್ಯಾಕ್ಟರಿನಲ್ಲಿ ಮೀಥೇನ್ ಅನಿಲ ಸ್ಪೋಟಗೊಂಡು ,ಇಡೀ ಕಾರ್ಖಾನೆ ಹೊತ್ತಿ ಉರಿದಿದ್ದು, ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಬೆಂಕಿ ಅವಘಡದ ಸುದ್ದಿ ತಿಳಿದ ತಕ್ಷಣ ಪೊಲೀಸರು, ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದು, ಈ ಬೆಂಕಿ ಅವಘಡದಲ್ಲಿ ಇಲ್ಲಿಯವರೆಗೆ ಆರು ಮಂದಿ ಮೃತಪಟ್ಟಿರುವ ಬಗ್ಗೆ ಆಡಳಿತಾಧಿಕಾರಿಗಳು ದೃಢಪಡಿಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.










