ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ನಿಧನ…

229
firstsuddi

ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ(57) ಅವರು ತೀವ್ರ ಹೃದಯಾಘಾತದಿಂದ ಮೃತರಾಗಿದ್ದಾರೆ. ಇಂದು ಮಧ್ಯಾಹ್ನ ಶಿವಳ್ಳಿ ಅವರಿಗೆ ಹೃದಯಾಘಾತವಾದ ಹಿನ್ನೆಲೆ ಹುಬ್ಬಳ್ಳಿಯ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಧಾರವಾಡದ ಕುಂದಗೋಳ ಕಾಂಗ್ರೆಸ್  ಶಾಸಕರಾಗಿ ಆಯ್ಕೆಯಾಗಿದ್ದ ಸಿ.ಎಸ್. ಶಿವಳ್ಳಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.