ಸಚಿವ ಡಿಕೆ ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು ಮಂಜೂರು…

291
firstsuddi

ಬೆಂಗಳೂರು: ದೆಹಲಿಯ ನಿವಾಸಗಳ ಮೇಲೆ ಐಟಿ ದಾಳಿ ನಡೆದಿದ್ದ ಪ್ರಕರಣದಲ್ಲಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣ ಆರೋಪಿಗಳಾಗಿದ್ದ ಡಿ.ಕೆ.ಶಿವಕುಮಾರ್, ಆಂಜನೇಯ, ರಾಜೇಂದ್ರ, ಸುನಿಲ್ ಶರ್ಮಾ ಅವರಿಗೆ ತಲಾ 25 ಸಾವಿರ ನಗದು ಶ್ಯೂರಿಟಿ ಹಾಗೂ ಒಂದು ಲಕ್ಷ ಬಾಂಡ್ ನೀಡಿ ಹಾಗೂ ತನಿಖೆಗೆ ಸಹಕರಿಸಬೇಕು ಎಂಬ ಷರತ್ತು ವಿಧಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ನ್ಯಾ.ಎಂ.ಎಸ್.ಆಳ್ವ ಜಾಮೀನು ಮಂಜೂರು ಮಾಡಿದ್ದಾರೆ.