ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಇಬ್ಬರ ಬಂಧನ…

236
firstsuddi

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಅಪ್ರಾಪ್ತ ಬಾಲಕಿಯ ಫೋಟೋ ಹಾಗೂ ಆಕೆಯ ವಿರುದ್ದವಾಗಿ ಸಾಮಾಜಿಕ ಜಾಲತಾಣದಲ್ಲಿ ಹಲವು ಸಂದೇಶವನ್ನು ಕಳುಹಿಸಿದರ ಕುರಿತು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ಬಂಧಿತರನ್ನು ಕೋಟೆಕಾರು ನಿವಾಸಿ ನಿವೇಶ್ (28) ಮತ್ತು ಕೆಪಿಟಿ ಉದಯನಗರ ನಿವಾಸಿ ದುರ್ಗೇಶ್ (25) ಎಂದು ಗುರುತಿಸಲಾಗಿದೆ.ಮಂಗಳೂರು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಆಕಾಶಭವನ ಶರಣ್ ಎಂಬಾತನು ಅತ್ಯಾಚಾರ ವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಅಪ್ರಾಪ್ತ ಬಾಲಕಿಯ ಫೋಟೋ ಹಾಗೂ ಆಕೆಯ ವಿರುದ್ದ ವಾಗಿ ಸಾಮಾಜಿಕ ಜಾಲತಾಣದಲ್ಲಿ ಹಲವು ಸಂದೇಶವನ್ನು ಕಳುಹಿಸಿದ್ದು ಈ ಕುರಿತು ಮಹಿಳಾ ಪೊಲೀಸ್  ಠಾಣೆಯಲ್ಲಿ ದಾಖಲಾಗಿತ್ತು.