ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ 1800 ಕೋಟಿ ಡೈರಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು 10 ಪ್ರಶ್ನೆಗಳ ಮೂಲಕ ಕಾಂಗ್ರೆಸ್ ಗೆ ಪ್ರಶ್ನಿಸಿದ್ದಾರೆ.
1. ಈ ಡೈರಿ ನಿಮಗೆ ಸಿಕ್ಕಿದ್ದು ಯಾವಾಗ?
2. ಯಾರು ಈ ಡೈರಿಯನ್ನು ತಂದುಕೊಟ್ಟರು?
3. ಎಲ್ಲಿ ಕೊಟ್ಟರು?
4. ಒರಿಜಿನಲ್ ಡೈರಿ ಎಲ್ಲಿ?
5. ಯಾಕೆ ಇದುವರೆಗೂ ಈ ಡೈರಿ ಆದರಿಸಿ ಲೋಕಾಯುಕ್ತ ಅಥವಾ ಎಸಿಬಿಗೆ ದೂರು ಕೊಡಲಿಲ್ಲ?
6. 2013 ಮೇ ತಿಂಗಳಿನಿಂದ ನಿಮ್ಮದೇ ಪಕ್ಷದ ಆಡಳಿತ ಇದ್ದರೂ ಯಾವುದೇ ತನಿಖೆ ನಡೆಸದೇ ಇರಲು ಕಾರಣವೇನು?
7. ಯಡಿಯೂರಪ್ಪನವರದ್ದೆಂದು ಹೇಳಲಾದ ಡೈರಿಯು ಡಿ.ಕೆ.ಶಿವಕುಮಾರ್ ಮನೆಯಲ್ಲಿ ಪತ್ತೆಯಾಗಿದ್ದು ಹೇಗೆ? ಇದಕ್ಕೆ ಡಿ.ಕೆ.ಶಿವಕುಮಾರ್ ಉತ್ತರಿಸಬೇಕಾಗಿದೆ.
8. ಈ ಹಿಂದೆ ಪ್ರಕರಣವೊಂದರ ಬಗ್ಗೆ ಎಸಿಬಿಗೆ ದೂರು ನೀಡಿದ್ದ ಕಾಂಗ್ರೆಸ್ ಮುಖಂಡರು ಈಗ ಯಾವುದೇ ದೂರು ನೀಡದಿರಲು ಕಾರಣವೇನು?
9 ಎಂಎಲ್ ಸಿ ಗೋವಿಂದರಾಜ್ ಅವರ ಮನೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಡೈರಿಯಲ್ಲಿ ಕಾಂಗ್ರೆಸ್ಸಿನ ಯಾವ್ಯಾವ ನಾಯಕರಿಗೆ ಹಣ ಸಂದಾಯವಾಗಿದೆ ಎನ್ನುವುದು ನಮೂದಾಗಿತ್ತು. ಆಗ ಕಾಂಗ್ರೆಸ್ ನಾಯಕರು ಮುಜಗರಕ್ಕೆ ಸಿಲಿಕಿದ್ದಾಗಲೇ ಯಡಿಯೂರಪ್ಪ ಅವರ ಡೈರಿ ಕಾಂಗ್ರೆಸ್ ಪ್ರಾಯೋಜಕತ್ವದಲ್ಲಿ ಸೃಷ್ಟಿಯಾಗಿದ್ದು ನಿಜವಲ್ಲವೇ?
10.ಬಿಜೆಪಿ ನಾಯಕರದ್ದೆನ್ನಲಾದ ಡೈರಿ ಪ್ರಕರಣವು ಜನಲೋಕಪಾಲ್ ತನಿಖೆ ನಡೆಸಲು ಯೋಗ್ಯವಾಗಿದೆ ಎಂದು ಕಾಂಗ್ರೆಸ್ ವಕ್ತಾರರು ಹೇಳಿದ್ದಾರೆ. ಆದರೆ ಆರೋಪ ಮಾಡಿದವರು ದೂರು ನೀಡಬೇಕೆ ಅಥವಾ ದೂರಿಗೊಳಗಾದವರೆ? ಎಂದು ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ.










