ಮೂಡಿಗೆರೆ ತಾಲೂಕನ್ನು ಅತಿವೃಷ್ಟಿ ಪ್ರದೇಶವನ್ನಾಗಿ ಘೋಷಿಸಿ 500ಕೋಟಿ ವಿಶೇಷ ಪ್ಯಾಕೇಜ್ ನೀಡುವಂತೆ ಸಿ.ಎಂ ಗೆ ಮನವಿ ಸಲ್ಲಿಸಿದ ಶಾಸಕ ಎಂ.ಪಿ ಕುಮಾರಸ್ವಾಮಿ…

2518
firstsuddi

ಮೂಡಿಗೆರೆ- ಶ್ರಾವಣ ಮಾಸ ಪೂಜೆ ಹಿನ್ನಲೆಯಲ್ಲಿ ಕುಮಾರಸ್ವಾಮಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳುವ ವೇಳೆ ಹ್ಯಾಂಡ್ ಪೊಸ್ಟ್ ಸರ್ಕಲ್ ಸಮೀಪ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸ್ವಾಗತ ಕೋರಿ ಶಾಸಕ ಎಂ.ಪಿ ಕುಮಾರಸ್ವಾಮಿ ತಾಲೂಕಿನಲ್ಲಿ ಜೂನ್ ತಿಂಗಳಿಂದ ಆಗಸ್ಟ್ ವರೆಗೆ ಭಾರಿ ಮಳೆ ಸುರಿದಿದ್ದು, ಈ ಭಾಗದ ಎಲ್ಲಾ ರಸ್ತೆಗಳು ಗುಂಡಿಯಾಗಿದ್ದು, ಇದರಿಂದ ಜನ ಸಾಮಾನ್ಯರಿಗೆ ಪ್ರಯಾಣಿಸಲು ತೊಂದರೆಯಾಗುತ್ತಿದ್ದು, ಹಾಗೂ ಮಲೆನಾಡು ಪ್ರದೇಶದಲ್ಲಿ ಅಧಿಕ ಮಳೆಯಾಗಿದ್ದರಿಂದ ಕಾಫಿ, ಏಲಕ್ಕಿ, ಮೆಣಸು, ಅಡಿಕೆ,ಬೆಳೆಗಳು ಸಂಪೂರ್ಣ ಹಾನಿಯಾಗಿದ್ದು, ಇಲ್ಲಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಹಾಗೂ ನನ್ನ ಕ್ಷೇತ್ರವನ್ನು ಅತಿವೃಷ್ಟಿ ಪ್ರದೇಶವನ್ನಾಗಿ ಘೋಷಿಸಿ 500ಕೋಟಿ ವಿಶೇಷ ಪ್ಯಾಕೇಜ್ ನೀಡಬೇಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.