ಕೈ ಮುಗಿದು  ಅತೀವೃಷ್ಟಿ ಬಗ್ಗೆ ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ ಶಾಸಕ ಎಂ.ಪಿ ಕುಮಾರಸ್ವಾಮಿ…

708

ಮೂಡಿಗೆರೆ- ತಾಲೂಕಿನಲ್ಲಿ ಕಳೆದ ಎರಡು ತಿಂಗಳಿನಿಂದ ಸುರಿದ ಧಾರಾಕಾರ ಮಳೆ ಸಾಕಷ್ಟು ಅವಾಂತರಗಳನ್ನ ಸೃಷ್ಟಿಸಿದ್ದು, ಭಾರಿ ಮಳೆಗೆ ಅಡಿಕೆ, ಕಾಫಿ, ಮೆಣಸು ಬೆಳೆ ನಾಶವಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮೂಡಿಗೆರೆ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಮಾಡಿ ಅತೀವೃಷ್ಠಿ ಬಗ್ಗೆ ಪರಿಶೀಲನೆ ನಡೆಸುವಂತೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಕೈ ಮುಗಿದು ಬೇಡಿಕೊಳ್ಳುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.