ಬೆಳಗಾವಿ– ಪಿಎಲ್ ಡಿ ಬ್ಯಾಂಕ್ ಚುನಾವಣಾ ಜಟಾಪಟಿಯ ಕಾನೂನು ಸಮರದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮೊದಲ ಗೆಲುವು ಸಿಕ್ಕಿದೆ. ಈ ಮೂಲಕ ಪಿಎಲ್ಡಿ ಬ್ಯಾಂಕ್ ಚುನಾವಣೆಯನ್ನು ಮುಂದೂಡಲು ನಡೆಸಿದ ಪ್ರಯತ್ನದಲ್ಲಿ ಜಾರಕಿಹೊಳಿ ಸಹೋದರರಿಗೆ ಹಿನ್ನಡೆಯಾಗಿದೆ.ಪಿಎಲ್ ಡಿಬ್ಯಾಂಕ್ ಚುನಾವಣೆ ನಡೆಸುವಂತೆ ಆಗ್ರಹಿಸಿ ಜಾರಕಿಹೊಳಿ ಸಹೋದರರ ವಿರುದ್ಧ ಬೀದಿಗಿಳಿದು ಲಕ್ಷ್ಮೀ ಹೆಬ್ಬಾಳಕರ್ ಹೋರಾಟ ನಡೆಸಿದ್ದರು. ಚುನಾವಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಬೆಳಗಾವಿ ತಹಸೀಲ್ದಾರ್ ಚುನಾವಣೆಯನ್ನು ಮುಂದೂಡಿದ್ದರು. ಈಗ ಧಾರವಾಡ ಹೈಕೊರ್ಟ್ ಚುನಾವಣೆ ನಡೆಸುವಂತೆ ಆದೇಶ ಹೊರಡಿಸಿದೆ.