ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಬೆಳಗಾವಿ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಅರಬಾವಿ, ಗೋಕಾಕ, ಬೈಲಹೊಂಗಲ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಮಾಡಲಾಯಿತು. ದೇಶದ ಒಳಿತಿಗೆ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಹೀಗಾಗಿ ಕ್ಷೇತ್ರದ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಜನರಲ್ಲಿ ಮನವಿ ಮಾಡಿದೆ. ಈ ವೇಳೆ ಅನೇಕ ಮುಖಂಡರು ಉಪಸ್ಥಿತರಿದ್ದರು ಎಂದು ಟ್ವೀಟ್ ಮಾಡಿದ್ದಾರೆ.










