ಮತ್ತೊಮ್ಮೆ ಮೋದಿಯವರು ದೇಶದ ಪ್ರಧಾನಿಯಾಗಬೇಕು: ಉಮೇಶ್ ಜಾಧವ್…

175
firstsuddi

ಕಲಬುರಗಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಉಮೇಶ್ ಜಾಧವ್ ಅವರು ಇಂದು ಕಲಬುರಗಿ ನಗರದ ಎಸ್.ವಿ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿಯ ಬೃಹತ್ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಪಕ್ಷದ ಚಿಹ್ನೆಯುಳ್ಳ ಶಾಲು ಹೊದಿಸಿ ಹಾರ ಹಾಕಿ ಜಾಧವ್ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಉಮೇಶ್ ಜಾಧವ್ ಅವರು ಬಹಳ ಸಂತೋಷದಿಂದ ಬಿಜೆಪಿ ಸೇರಿದ್ದೇನೆ. ಬಿಜೆಪಿ ಪಕ್ಷ ನನ್ನನ್ನು ಒಳ್ಳೆಯ ರೀತಿಯಲ್ಲಿ ಬರಮಾಡಿಕೊಂಡಿದ್ದಾರೆ. ಮತ್ತೊಮ್ಮೆ ಮೋದಿಯವರು ದೇಶದ ಪ್ರಧಾನಿಯಾಗಬೇಕು ಎಂದಿದ್ದಾರೆ