ಮೂಡಿಗೆರೆ: ಹಾಸನ ಮೂಲದ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನ, ಸ್ಥಳದಲ್ಲೇ ಯುವಕನ ಸಾವು, ಯುವತಿ ಅರೆನಗ್ನವಾಗಿ ಪತ್ತೆ.

1309
firstsuddi

ಮೂಡಿಗೆರೆ: ಹಾಸನ ಮೂಲದ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಪ್ರೀಯಕರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೆಸ್ಗಲ್ ಗ್ರಾಮದ ತೋಟದಲ್ಲಿ ನಡೆದಿದೆ. ಕೀರ್ತಿ ಮೃತಪಟ್ಟ ಯುವಕ. ಕೀರ್ತಿ ಪಿಯುಸಿ ಓದಿ ಮೆಕಾನಿಕ್ ಕೆಲಸ ಮಾಡುತ್ತಿದ್ದು, ಈತ ಸಹನಾ ಎಂಬ ನಾಲ್ಕನೇ ವರ್ಷದ ಕಂಪ್ಯೂಟರ್ ‌ಸೈನ್ಸ್ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ನಿನ್ನೆ ಆಕೆಯೊಂದಿಗೆ ಹೋಂಡಾ ಆಕ್ಟಿವಾ ಬೈಕ್ ನಲ್ಲಿ ಮೂಡಿಗೆರೆಗೆ ಬಂದಿದ್ದು, ಹೆಸ್ಗಲ್ ಗ್ರಾಮದ ತೋಟವೊಂದರಲ್ಲಿ ರಸ್ತೆ ಬದಿ ಬೈಕ್ ನಿಲ್ಲಿಸಿ ತೋಟದೊಳಗೆ ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೀರ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವತಿ ಅರೆನಗ್ನವಾಗಿ ಪತ್ತೆಯಾಗಿದ್ದು, ಆಕೆಯನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ರವಾನೆ ಮಾಡಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಕಂಡುಬಂದಿಲ್ಲ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.