ಕೊಪ್ಪಳ: ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿರುವ ಘಟನೆ ಜಿಲ್ಲೆಯ ಬೇವೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಹಲ್ಲಿಬಿದ್ದ ಬಿಸಿಯೂಟ ಸೇವಿಸಿದ ಪರಿಣಾಮ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡಿದ್ದು, ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗಿದ್ದು, ಕೆಲ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ .










