ದೀಪ ಹಚ್ಚುವ ವೇಳೆ ಅಗ್ನಿ ಅವಘಡ ಸಂಭವಿಸಿ ತಾಯಿ,12 ದಿನದ ಮಗು ಸಾವು…

397
firstsuddi

ಚಿತ್ರದುರ್ಗ : ದೀಪ ಹಚ್ಚುವ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬಾಣಂತಿ ಹಾಗೂ 12 ದಿನದ ಮಗು ಮೃತಪಟ್ಟಿರುವ ಮನಕಲಕುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತೊಡ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ. ಗೌರಮ್ಮ(20) ಹಾಗೂ 12 ದಿನದ ಗಂಡು ಮಗು ಅವಘಡದಲ್ಲಿ ಮೃತಪಟ್ಟಿದ್ದಾರೆ. ಮನೆಯಲ್ಲಿ ದೀಪಾ ಹಚ್ಚುವ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ತಾಯಿ ಗೌರಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಚಳ್ಳಕೆರೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.