ಮಕ್ಕಳ ದಿನಾಚರಣೆಯಂದೇ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ…

270
firstsuddi

ತುಮಕೂರು :ಮಕ್ಕಳ ದಿನಾಚರಣೆಯಂದೇ ತಾಯಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ  ನಡೆದಿದೆ. ಶಿರಾ ತಾಲ್ಲೂಕಿನ ಹುಚ್ಚೇಘಟ್ಟೆ ಗ್ರಾಮದ ನಿವಾಸಿ ಶೈಲಾ (24) ಅವರು  ನಿನ್ನೆ ಶಿರಾದ ಖಾಸಗಿ ಆಸ್ಪತ್ರೆಯಲ್ಲಿ  ಮೂವರು ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮೂವರು ಮಕ್ಕಳು ಆರೋಗ್ಯವಾಗಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಸುದ್ದಿ ತಿಳಿದ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರು ಆಸ್ಪತ್ರೆಗೆ ಭೇಟಿ ನೀಡಿ  ಹರ್ಷ ವ್ಯಕ್ತಪಡಿಸುತ್ತಿದ್ದಾರೆ.