ರಾಜ್ಯ ಸರ್ಕಾರ ಜಾತಿ-ಜಾತಿಗಳ ಮಧ್ಯೆ ತಂದಿಡುವ ಕೆಲಸ ಮಾಡುತ್ತಿದೆ : ಶ್ರೀರಾಮುಲು

660

ದಾವಣಗೆರೆ : ರಾಜ್ಯ ಸರ್ಕಾರ ಜಾತಿ ಜಾತಿಗಳ ಮಧ್ಯೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ. ರೈತರು, ಬಡವರು, ಕೂಲಿ ಕಾರ್ಮಿಕರಿಗೆ ಯಾವುದೇ ನೆರವು ನೀಡುತ್ತಿಲ್ಲ. ಕುಂಭಕರ್ಣ ನಿದ್ದೆಯಲ್ಲಿರೋ ಸರ್ಕಾರವನ್ನ ಹೊಗಲಾಡಿಸಿ, ಬಿಜೆಪಿ ಸರ್ಕಾರವನ್ನ ಅಧಿಕಾರಕ್ಕೆ ತರಬೇಕೆಂದು ಸಂಸದ ಶ್ರೀರಾಮುಲು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯ ಹರಪನಹಳ್ಳಿ ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದರು. ಇದುವರೆಗೆ 30ಕ್ಕೂ ಹೆಚ್ಚು ಹಿಂದೂ ಯುವಕರ ಕೊಲೆಯಾಗಿದೆ. ಆದರೆ, ಯಾರಿಗೂ ಶಿಕ್ಷೆಯಾಗಿಲ್ಲ. ರಾಜ್ಯ ಸರ್ಕಾರ ಹಿಂದೂಗಳನ್ನು ಹತ್ಯೆ ಮಾಡುವವರಿಗೆ ಶಿಕ್ಷೆ ನೀಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ನಿರಂತರ ಶೂಟೌಟ್, ಕೊಲೆ, ದರೋಡೆಗಳಾಗ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಆದ್ರೆ, ಕಾನೂನು ಸುವ್ಯವಸ್ಥೆಯನ್ನ ಸರಿಪಡಿಸಲು ಸಿಎಂ ಮುಂದಾಗದಿರುವುದು ದುರಂತ ಎಂದು ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.