ಮೂಡಿಗೆರೆ :ಚಾಲಕನ ನಿಯಂತ್ರಣ ತಪ್ಪಿ ಶಿಫ್ಟ್ ಕಾರು ಪಲ್ಟಿಯಾಗಿರೋ ಘಟನೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಭಾರೀ ಪ್ರಮಾಣದ ಮಂಜು ಕವಿದಿದ್ದ ಕಾರಣ ಚಾರ್ಮಾಡಿ ಘಾಟಿಯ ಸೋಮನಕಾಡು ಸಮೀಪ ಈ ದುರ್ಘಟನೆ ಸಂಭವಿಸಿದೆ.ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಜಲಪಾತದತ್ತ ಮುನ್ನಗ್ಗಿ ಮಗಚಿ ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ದಾವಣಗೆರೆ ಮೂಲದ ಐವರು ಚಾರ್ಮಾಡಿ ಘಾಟ್ ಮುಖಾಂತರ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಐವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ. ಜಲಪಾತದ ಬಳಿ ಮಗುಚಿ ಬಿದ್ದ ಕಾರನ್ನ ಸ್ಥಳಿಯರು ಹಾಗೂ ಬಣಕಲ್ ಪೊಲೀಸರು ಸಹಕಾರದೊಂದಿಗೆ ಹಿಟಾಚಿ ಮೂಲಕ ಮೇಲೆತ್ತಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.









