ಮೂಡಿಗೆರೆ: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿನ ಅರಣ್ಯದಲ್ಲಿ ವಯೋವೃದ್ಧನ ಸುಟ್ಟಿರುವ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯ ದೇಹದ ಬಹುತೇಕ ಭಾಗ ಸುಟ್ಟು ಹೋಗಿದ್ದು, ಅಂದಾಜು 60 ವರ್ಷದ ವೃದ್ಧ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ವೃದ್ಧನನ್ನ ಪೆಟ್ರೋಲ್ ಹಾಕಿ ಸುಟ್ಟಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.










