ಮೂಡಿಗೆರೆ: ಹೃದಯಾಘಾತದಿಂದ ಬಸ್ಸಿನಲ್ಲೇ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ನಡೆದಿದೆ. ಜನಾರ್ಧನ(51)ಮೃತ ಧುರ್ದೈವಿ . ಜನಾರ್ಧನ ಅವರು ಪತ್ನಿ ರತ್ನ ಜೊತೆ ಜನ್ನಾಪುರದಿಂದ ಮಂಗಳೂರಿನ ಆಸ್ಪತ್ರೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ಊಟಕ್ಕೆ ಬಸ್ ನಿಲ್ಲಿಸಿದಾಗ ಈ ದುರ್ಘಟನೆ ನಡೆದಿದ್ದು, ಮೃತದೇಹವನ್ನು ಅದೇ ಸರ್ಕಾರಿ ಬಸ್ಸಿನಲ್ಲೇ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










