ಮೂಡಿಗೆರೆ : ಕುಡಿದ ಮತ್ತಿನಲ್ಲಿ ಮಗನೇ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ನಡೆದಿದೆ. ಮೀನಾಕ್ಷಿ ಮಗನಿಂದ ಕೊಲೆಯಾದ ಮೃತ ದುರ್ದೈವಿ. ಗಣೇಶ್ ತಾಯಿಯನ್ನೇ ಕೊಲೆ ಮಾಡಿದ ಆರೋಪಿ. ಈತ ಕುಡಿದ ಮತ್ತಿನಲ್ಲಿ ತಾಯಿಗೆ ದೊಣ್ಣೆಯಿಂದ ಹೊಡೆದು ರಸ್ತೆಯಲ್ಲೇ ಹತ್ಯೆ ಮಾಡಿದ್ದಾನೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.