ಮೂಡಿಗೆರೆ: ಆಪೆ ಆಟೋ ರಸ್ತೆಬದಿಯ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಬಾರ್ಗಲ್ ಗ್ರಾಮದ ಬಳಿ ನಡೆದಿದೆ. ಆಟೋದಲ್ಲಿದ್ದ ಗೀತಾ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಸೇರಿ ಇಬ್ಬರ ಸ್ಥಿತಿ ಗಂಭೀರ ವಾಗಿದ್ದು, ಗಾಯಾಳುಗಳನ್ನೂ ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.










