ಮೂಡಿಗೆರೆ : ಆಸ್ತಿ ವಿಚಾರವಾಗಿ ಆರಂಭವಾದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯ…

1807
firstsuddi

ಮೂಡಿಗೆರೆ : ಆಸ್ತಿ ವಿಚಾರವಾಗಿ ಆರಂಭವಾದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ಬಣಕಲ್ ಸಮೀಪದ ಚೇಗು ಗ್ರಾಮದಲ್ಲಿ ನಡೆದಿದೆ. ಮಂಜಯ್ಯ(60) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಲಕ್ಷ್ಮಣ ಕೊಲೆಗೈದ ಆರೋಪಿಯಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಮಂಜಯ್ಯ ಹಾಗೂ ಲಕ್ಷ್ಮಣ ಸಹೋದರರ ನಡುವೆ ತೋಟದ ವಿಚಾರವಾಗಿ ಜಗಳ ನಡೆದಿತ್ತು. ಅದೇ ವಿಚಾರವಾಗಿ ನಿನ್ನೆ ರಾತ್ರಿಯೂ ಕೂಡಾ ಇಬ್ಬರ ನಡವೆ ಜಗಳವಾಗಿದ್ದು, ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಆರೋಪಿ ಲಕ್ಮಣ ಅವರು ಮಂಜಯ್ಯ ಅವರ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ್ದು, ಪರಿಣಾಮ ಗಂಭೀರವಾಗಿ ಗಾಯಗೊಂಡ ಮಂಜಯ್ಯ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.