ಮೂಡಿಗೆರೆ :ಬಾವಿಗೆ ಬಿದ್ದಿದ್ದ ಹಸುವನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ತಾ.ಪಂ. ಅಧ್ಯಕ್ಷ ಕೆ.ಸಿ. ರತನ್ ಕುಮಾರ್ ಯಶಸ್ವಿ…

222

ಮೂಡಿಗೆರೆ : ಹೆಸಗಲ್ ಗ್ರಾಮ ಪಂಚಾಯಿತಿ ಹಿಂಭಾಗವಿರುವ ಬಾವಿಗೆ ಹಸುವೊಂದು ಬಿದ್ದಿರುವ ಘಟನೆ ಇಂದು ನಡೆದಿದೆ. ಬಿಸಿಲಿನ ಬೇಗೆಯಿಂದ ಸುತ್ತ ಮುತ್ತ ನೀರಿಲ್ಲದ ಕಾರಣ ಹಸುವು ನೀರನ್ನು ಕುಡಿಯಲು ಹೋಗಿ ಬಾವಿಗೆ ಬಿದ್ದಿದೆ ಎನ್ನಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ತಾಲೂಕು ಪಂಚಾಯಿತಿ ಅಧ್ಯಕ್ಷ ಕೆ.ಸಿ. ರತನ್ ಕುಮಾರ್ ಅವರು ಅಗ್ನಿಶಾಮಕ ದಳ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಹಸುವನ್ನು ರಕ್ಷಿಸುವಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಯಶಸ್ವಿಯಾಗಿದ್ದಾರೆ. ಇವರೊಂದಿಗೆ ಗ್ರಾಮ ಪಂಚಾಯಿತಿ ಸದಸ್ಯ ಪ್ರಶಾಂತ್, ಹಾಗೂ ಸಿಬ್ಬಂದಿ ನಜೀರ್, ಸಮಾಜ ಸೇವಕರಾದ ಹಸೇನರ್ ಸೇರಿದಂತೆ ಗ್ರಾಮಸ್ಥರು ಭಾಗಿಯಾದರು.