ಮೂಡಿಗೆರೆ : ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತದ ಹುಲ್ಲಿನ ಬಣವೆ ಹೊತ್ತಿ ಉರಿದಿರೋ ಘಟನೆ ತಾಲೂಕಿನ ಕುಕ್ಕಳ್ಳಿ ಗ್ರಾಮದಲ್ಲಿ ನಡೆದಿದೆ. ಕುಕ್ಕಳ್ಳಿ ಗ್ರಾಮದ ಲಕ್ಷ್ಮಣ್ ಗೌಡ ಎಂಬುವರಿಗೆ ಸೇರಿದ ಮೇವಿನ ಬಣವೆ ಇದಾಗಿದ್ದು, ಆಕಸ್ಮಿಕ ಬೆಂಕಿ ತಗುಲಿ ಬಣವೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸುಮಾರು ಒಂದು ಲಕ್ಷ ಮೌಲ್ಯದ ಭತ್ತದ ಹುಲ್ಲಿನ ಮೇವು ನಷ್ಟವಾಗಿದ್ದು, ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










