ಚಿಕ್ಕಮಗಳೂರು : ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಮೂಲಭೂತ ಸೌಲಭ್ಯಗಳ ಕೊರತೆ ಹಿನ್ನೆಲೆ, ಮೂಡಿಗೆರೆ ತಾಲೂಕಿನ ಕುಂದೂರು- ದರ್ಶನ ಗ್ರಾಮಸ್ಥರು ಲೋಕಸಭಾ ಚುನಾವಣೆ ಮತದಾನವನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದು, ಹತ್ತಾರು ಬಾರಿ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಮನವಿ ನೀಡಿದರೂ ಸ್ಪಂಧಿಸಿಲ್ಲ. ನಮ್ಮ ಗ್ರಾಮಕ್ಕೆ ನೀರು, ವಿದ್ಯುತ್, ರಸ್ತೆ ಸೇರಿ ಹತ್ತಾರು ಸಮಸ್ಯೆಗಳಿದ್ದು, ಕಾಡು ಪ್ರಾಣಿಗಳ ಹಾವಳಿಯು ಮಿತಿ ಮೀರಿದ್ದು, ಕಾಡಾನೆಗಳು ರಸ್ತೆ ಹಾಗೂ ಮನೆಯ ಅಕ್ಕಪಕ್ಕಕ್ಕೆ ಬರುತ್ತಿದ್ದು, ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ರಾಜಕಾರಣಿಗಳಿಗೆ ಚುನಾವಣಾ ಸಮಯದಲ್ಲಿ ಮಾತ್ರ ನಮ್ಮ ಊರು ನೆನಪಿಗೆ ಬರುತ್ತದೆ. ಜನಪ್ರತಿನಿಧಿಗಳು ವೋಟಿಗೆ ಬರುತ್ತಾರೆ. ಆದರಿಂದ ಈ ಲೋಕಸಭಾ ಚುನಾವಣೆಯಲ್ಲಿ ಮತದಾನವನ್ನು ಬಹಿಷ್ಕರಿಸುವ ತೀರ್ಮಾನವನ್ನು ಗ್ರಾಮಸ್ಥರು ಸೇರಿ ಮಾಡಿಕೊಂಡಿದ್ದೇವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Home ಸ್ಥಳಿಯ ಸುದ್ದಿ ಮೂಡಿಗೆರೆ : ಜನಪ್ರತಿನಿಧಿಗಳ ನಿರ್ಲಕ್ಷ್ಯ ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಕುಂದೂರು-ದರ್ಶನ ಗ್ರಾಮಸ್ಥರ ಆಕ್ರೋಶ…









