ಮೂಡಿಗೆರೆ: ಚಿಕ್ಕಮಗಳೂರಿನಿಂದ ಮೂಡಿಗೆರೆಗೆ ತೆರಳುತ್ತಿದ್ದ KA18F602 ಬಸ್ ನಲ್ಲಿ ಕುಳಿತಿದ್ದ ವಿದ್ಯಾರ್ಥಿಗಳ ಪಾಸ್ ಅನ್ನು ನಿರ್ವಾಹಕ ಅನುಮತಿಸದೆ, ಇದನ್ನು ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ನಿರ್ವಾಹಕ ಉಡಾಫೆ ಉತ್ತರವನ್ನು ನೀಡಿ ವಿದ್ಯಾರ್ಥಿಗಳನ್ನು ಬಸ್ ನಿಂದ ಕೆಳಗಿಳಿಸಿರುವ ಘಟನೆ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ತಕ್ಷಣ ಎಬಿವಿಪಿ ವಿದ್ಯಾಥಿಗಳು ಮೂಡಿಗೆರೆ ಬಸ್ ನಿಲ್ದಾಣದ ಬಳಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದ್ದು, ನಿರ್ವಾಹಕ ಮಹೇಶ್ ನಾಯ್ಕ್ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಬಳಿಕ ಟ್ರಾಫಿಕ್ ನಿಯಂತ್ರಕ ಸತೀಶ್ ಸ್ಥಳಕ್ಕೆ ಆಗಮಿಸಿ ವಿದ್ಯಾಥಿಗಳ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ ಎಬಿವಿಪಿ ವಿಭಾಗ ಸಂಚಾಲಕ ದೀಕ್ಷಿತ್, ಸಚಿನ್ ದಾರದಹಳ್ಳಿ, ವಿದ್ಯಾರ್ಥಿಗಳಾದ ಲಿಖಿತ, ಸೌಂದರ್ಯ, ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.










