ಮೂಡಿಗೆರೆ : ಫೆ. 14ರಂದು ಪ್ರವಾಸೋಧ್ಯಮ ಇಲಾಖೆಯ ಹೋಟೆಲ್ “ನಿಸರ್ಗ ಗ್ರ್ಯಾಂಡ್” ಆರಂಭ…

945
firstsuddi

ಬಣಕಲ್ : ಇದೇ ಫೆ.14 ರಂದು ಶುಕ್ರವಾರ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಬಳಿ ನೂತನವಾಗಿ ನಿರ್ಮಿಸಿರುವ ಪ್ರವಾಸೋಧ್ಯಮ ಇಲಾಖೆಯ ಶುದ್ಧ ಸಸ್ಯಹಾರಿ ನೂತನ ಹೋಟೆಲ್ “ನಿಸರ್ಗ ಗ್ರ್ಯಾಂಡ್” ಉದ್ಘಾಟನೆಯಾಗಲಿದೆ ಎಂದು ಗುತ್ತಿಗೆದಾರ ಮರ್ಕಲ್ ಸತೀಶ್ ಅವರು ತಿಳಿಸಿದ್ದಾರೆ.

ಕಟ್ಟಡ ಉದ್ಘಾಟನೆಯನ್ನು ಪ್ರವಾಸೋಧ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸಿ.ಟಿ. ರವಿ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ವಹಿಸಲಿದ್ದು, ಮುಖ್ಯ ಅಥಿತಿಗಳಾಗಿ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ, ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್, ಎಸ್.ಎಲ್, ಬೋಜೇಗೌಡ, ಮಾಜಿ ಶಾಸಕ ಬಿ.ಬಿ. ನಿಂಗಯ್ಯ, ಮಾಜಿ ಸಚಿವೆ ಮೋಟಮ್ಮ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಸಿ. ರತನ್, ಮುಖ್ಯ ಕಾರ್ಯಫಲಕ ಅಭಿಯಂತರ ದಕ್ಷಿಣ ಮೂರ್ತಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ರಾಜು, ಜಿಲ್ಲಾ ಪಂಚಾಯಿತಿ ಸದಸ್ಯ ಶಾಮಣ್ಣ ಬಣಕಲ್, ತಾಲ್ಲೂಕು ಪಂಚಾಯಿತಿ ಸದಸ್ಯೆ ವೀಣಾ ಉಮೇಶ್, ತರುವೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರವಿಕಲಾ ಪೈ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.