ಮೂಡಿಗೆರೆ : ಮಹಾಮಾರಿ ಕೋವಿಡ್-19 ಸೋಂಕು ಹರಡದಂತೆ ಮಂಗಳೂರು-ಚಿಕ್ಕಮಗಳೂರು ಜಿಲ್ಲಾ ಗಡಿ ಪ್ರದೇಶಗಳಲ್ಲಿ ಚೆಕ್‍ಪೋಸ್ಟ್ ಹಾಕಲಾಗಿದ್ದು, ಎಲ್ಲಾ ಗಡಿ ಪ್ರದೇಶಗಳಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ತಾಲ್ಲೂಕಿನ ಕೊಟ್ಟಿಗೆಹಾರ ಚೆಕ್‍ಪೋಸ್ಟ್ ನಲ್ಲಿ ಮೂಡಿಗೆರೆ ಪೊಲೀಸ್ ವೃತ್ತ ನಿರೀಕ್ಷಕ ಜಗನ್ನಾಥ್, ಬಣಕಲ್ ಸಬ್ ಇನ್ಸ್ ಪೆಕ್ಟರ್ ಶ್ರೀನಾಥ್ ರೆಡ್ಡಿ ಮತ್ತು ಅವರ ತಂಡದಿಂದ ಬಾರಿ ಬಿಗಿ ಭದ್ರತೆ ಮಾಡಲಾಗಿದ್ದು, ಸರಕು ವಾಹನ ಮತ್ತು ಆಂಬುಲೆನ್ಸ್ ಹೊರತುಪಡಿಸಿ ಬೇರೆ ಯಾವುದೇ ವಾಹನ ಮತ್ತು ಪ್ರಯಾಣಿಕರಿಗೆ ಪ್ರವೇಶಿಸಲು ನಿರ್ಬಂಧ ಹೇರಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಅವರು ಆದೇಶ ಹೊರಡಿಸಿದ್ದಾರೆ.










