ಬಹುಮಹಡಿ ಕಟ್ಟಡ ಕುಸಿತ-10 ಮಂದಿ ಸಾವು…

220
firstsuddi

ಮಹಾರಾಷ್ಟ್ರ : ಬಹುಮಹಡಿ ಕಟ್ಟಡ ಕುಸಿದು 10 ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಭಿವಾಂಡಿಯಲ್ಲಿ ನಡೆದಿದೆ. 3 ಅಂತಸ್ಥಿನ ಕಟ್ಟಡ ಇದಾಗಿದ್ದು, ಇಂದು ಮುಂಜಾನೆ 3:30ರ ಸುಮಾರಿಗೆ ಏಕಾಏಕಿ ಕಟ್ಟಡ ಕುಸಿದು ಬಿದ್ದಿದ್ದು, ಪರಿಣಾಮ 10 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ 25ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಎನ್‍ಡಿಆರ್‍ಎಫ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅವಶೇಷಗಳ ಅಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇದುವರೆಗೆ 5 ಮಂದಿಯನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.