ಹುಟ್ಟುಹಬ್ಬದ ದಿನವೇ ಸ್ನೇಹಿತರಿಂದ ಬಿಜೆಪಿ ಮುಖಂಡನ ಬರ್ಬರ ಹತ್ಯೆ…

261
firstsuddi

ಮೈಸೂರು : ಹುಟ್ಟುಹಬ್ಬದ ದಿನದಂದೇ ಬಿಜೆಪಿ ಮುಖಂಡನನ್ನು ಸ್ನೇಹತರೇ ಹತ್ಯೆ ಮಾಡಿರುವ ಘಟನೆ ಮೈಸೂರಿನ ಕುವೆಂಪುನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಿಜೆಪಿಯ ಮೈಸೂರು ನಗರ ಸ್ಲಂ ಮೋರ್ಚಾ ಉಪಾಧ್ಯಕ್ಷರಾದ ಆನಂದ್ ಎಂದು ಗುರುತಿಸಲಾಗಿದ್ದು, ನಿನ್ನೆ ಆನಂದ್ ಅವರ ಹುಟ್ಟುಹಬ್ಬವಿದ್ದ ಹಿನ್ನೆಲೆ, ನಗರದ ಲವಕುಶ ಪಾರ್ಕ್ ಬಳಿಯ ಸರ್ವಿಸ್ ಅಪಾರ್ಟ್‍ಮೆಂಟ್‍ನಲ್ಲಿ ರೂಮ್ ಮಾಡಿಕೊಂಡು ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಸ್ನೇಹಿತರೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಸ್ನೇಹಿತರ ನಡುವಿನ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಸ್ನೇಹಿತರೇ ಬಿಯರ್ ಬಾಟಲ್‍ನಿಂದ ಆನಂದ್ ಅವರಿಗೆ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡ ಕುವೆಂಪು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.