ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮೂವರ ಬರ್ಬರ ಹತ್ಯೆ…

172
firstsuddi

ಚಿತ್ರದುರ್ಗ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮೂವರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಬಳಿ ನಡೆದಿದೆ. ಮಾರೇಶ(50), ಯಲ್ಲೇಶ(30) ಹಾಗೂ ಸೀನಪ್ಪ(30) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಮೃತರು ಗ್ರಾಮದಲ್ಲಿ ಹಂದಿ ಸಾಕಾಣೆ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಹಂದಿ ಕಳ್ಳತನಕ್ಕೆ ಬಂದಿದ್ದ ಖದೀಮರಿಂದ ಈ ಕೃತ್ಯ ಸಂಭವಿಸಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ನಾಯಕನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.