ಬೆಂಗಳೂರು- ಅರಮನೆ ಮೈದಾನದಲ್ಲಿ ನಡೆದ ಬಿ.ಜೆ.ಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ರಾಜ್ಯ ಬಿ.ಜೆ.ಪಿ ಉಸ್ತುವಾರಿಯಾದ ಮುರುಳೀಧರ್ ರಾವ್ ಅವರು ರಾಹುಲ್ ಗಾಂಧಿ ಅವರಿಗೆ ಪದೇ ಪದೇ ಸೋತು ಅಭ್ಯಾಸವಾಗಿದೆ. ಬಿ.ಜೆ.ಪಿ ಮತ್ತು ಕಾಂಗ್ರೆಸ್ ನಡುವೆ ಹೋರಾಟವಿದ್ದ ಕಡೆಯೆಲ್ಲ ಕಾಂಗ್ರೆಸ್ ಸೋತಿದೆ. ಕರ್ನಾಟಕ ಚುನಾವಣೆಯಲ್ಲಿಯೂ ಜನ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ ಇದನ್ನು ಸಿದ್ದರಾಮಯ್ಯ ಅವರು ಕೂಡ ಒಪ್ಪಿಕೊಂಡಿದ್ದಾರೆ. ಹಾಗೂ ದೇಶಪ್ರೇಮಿಗಳು, ದೇಶಕ್ಕಾಗಿ ದುಡಿಯುವ ಆಸಕ್ತಿ ಹೊಂದಿರುವವರಿಗೆ ಬಿ.ಜೆ.ಪಿ ಪಕ್ಷ ಬಾಗಿಲು ತೆರೆದಿರುತ್ತದೆ ಎಂದು ಬೆಂಗಳೂರಿನಲ್ಲಿ ತಿಳಿಸಿದ್ದಾರೆ.